ಇತ್ತೀಚೆಗೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸಮಬಲದ ಪ್ರದರ್ಶನ ನೀಡಿದ್ದ ಶ್ರೀಲಂಕಾ, ಇದೀಗ ತವರಿನಲ್ಲಿ ನಡೆಯಲಿರುವ ಪ್ರವಾಸಿ ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗಿದೆ.
ಎರಡು ಪಂದ್ಯಗಳ ಟೆಸ್ಟ್ ಸರಣಿಗೆ 18 ಮಂದಿ ಆಟಗಾರರ ತಂಡವನ್ನ ಪ್ರಕಟಿಸಿರುವ ಅತಿಥೇಯ ಶ್ರೀಲಂಕಾ, ಹಲವು ಸ್ಪಿನ್ ಬೌಲರ್ಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ಆಲ್ರೌಂಡರ್ ಧನಂಜಯ ಡಿಸಿಲ್ವಾ, ವೇಗದ ಬೌಲರ್ ಅಸಿತಾ ಫೆರ್ನಾಂಡೊ ಮತ್ತು ಸ್ಪಿನ್ನರ್ ಜೆಫ್ರಿ ವಾಂಡರ್ಸೆ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕೋವಿಡ್ ಕಾರಣದಿಂದ ಈ ಮೂವರು ಆಟಗಾರರು ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ನಿಂದ ಹೊರಗುಳಿದಿದ್ದರು.
ಅಲ್ಲದೇ ಕೋವಿಡ್-19 ಕಾರಣದಿಂದ ಆಸೀಸ್ ಸರಣಿಯಲ್ಲಿ ಆಡುವ ಅವಕಾಶ ಕಳೆದುಕೊಂಡಿದ್ದ ಪ್ರಮುಖ ಬ್ಯಾಟ್ಸ್ಮನ್ ಪಥುಮ್ ನಿಸ್ಸಂಕ ಸಹ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 2ನೇ ಟೆಸ್ಟ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಡಗೈ ಸ್ಪಿನ್ನರ್ ಪ್ರಭಾತ್ ಜಯಸೂರ್ಯ, ಅತಿಥೇಯ ಪಾಕಿಸ್ತಾನ ವಿರುದ್ಧವೂ ಶ್ರೇಷ್ಠ ಬೌಲಿಂಗ್ ಪ್ರದರ್ಶಿಸುವ ನಿರೀಕ್ಷೆಯೊಂದಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದ್ದರೆ. ಅತಿಥೇಯ ಶ್ರೀಲಂಕಾ 3ನೇ ಸ್ಥಾನದಲ್ಲಿದೆ. ಹೀಗಾಗಿ ಎರಡು ತಂಡಗಳು ಸಹ ಮುಂದಿನ ವರ್ಷ ನಡೆಯುವ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ಗೆ ತಲುಪುವ ಸ್ಪರ್ಧೆಯ ರೇಸ್ನಲ್ಲಿವೆ. ಉಭಯ ತಂಡಗಳ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯ ಜುಲೈ 16ರ ಶನಿವಾರ ಗಾಲೆಯಲ್ಲಿ ಆರಂಭವಾಗಲಿದೆ. ಸರಣಿಯ ಎರಡನೇ ಪಂದ್ಯ ಕೊಲಂಬೊದಲ್ಲಿ ನಡೆಯಲಿದೆ.
ಶ್ರೀಲಂಕಾ ಟೆಸ್ಟ್ ತಂಡ: ದಿಮುತ್ ಕರುಣಾರತ್ನೆ(ನಾಯಕ), ಪತುಮ್ ನಿಸ್ಸಾಂಕ, ಓಷಾದ ಫೆರ್ನಾಂಡೊ, ಏಂಜೆಲೊ ಮ್ಯಾಥ್ಯೂಸ್, ಕುಸಾಲ್ ಮೆಂಡಿಸ್, ಧನಂಜಯ ಡಿಸಿಲ್ವಾ, ಕಮಿಂದು ಮೆಂಡಿಸ್, ನಿರೋಶನ್ ಡಿಕ್ವೆಲ್ಲಾ, ದಿನೇಶ್ ಚಂಡಿಮಲ್, ರಮೇಶ್ ಮೆಂಡಿಸ್, ಮಹೇಶ್ ತೀಕ್ಷಣ, ಕಸುನ್ ಫಿರ್ನಾಂಡೊ, ಅಸುನ್ ಫಿರ್ನಾಂಡೊ, ದಿಲ್ಶನ್ ಮಧುಶಂಕ, ಪ್ರಭಾತ್ ಜಯಸೂರ್ಯ, ದುನಿತ್ ವೆಲ್ಲಲಾಗೆ, ಜೆಫ್ರಿ ವಾಂಡರ್ಸೆ.
SL v PAK Test Series: ಶ್ರೀಲಂಕಾದ 18 ಆಟಗಾರರ ತಂಡ ಪ್ರಕಟ