Surav Ganguly – Virat Kohli – ವಿರಾಟ್ ಕೊಹ್ಲಿಗೆ ಬಿಗ್ ಬಾಸ್ ದಾದಾನ ಅಭಯ..!

ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯಲ್ಲಾದ್ರೂ ಕಿಂಗ್ ಕೊಹ್ಲಿ ಬ್ಯಾಟಿಂಗ್ ಫಾರ್ಮ್ ಕಂಡುಕೊಳ್ಳುತ್ತಾರಾ ಅನ್ನೋ ಪ್ರಶ್ನೆ ಇದಿಗ ಮತ್ತೊಮ್ಮೆ ಕ್ರಿಕೆಟ್ ಜಗತ್ತಿನಲ್ಲಿ ಸುತ್ತುವರಿಯುತ್ತಿದೆ.
ಕಳೆದ ಮೂರು ವರ್ಷಗಳಿಂದ ವಿರಾಟ್ ಕೊಹ್ಲಿ ಶತಕ ದಾಖಲಿಸಿಲ್ಲ. ಅಲ್ಲದೆ ಸತತವಾಗಿ ಬ್ಯಾಟಿಂಗ್ ಲಯ ಕಳೆದುಕೊಳ್ಳುತ್ತಿರುವುದು ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ಗೆ ದೊಡ್ಡ ಚಿಂತೆಯಾಗಿತ್ತು. ಅಷ್ಟೇ ಅಲ್ಲ, ಕ್ರಿಕೆಟ್ ದಿಗ್ಗಜರು ಕೂಡ ಕಿಂಗ್ ಕೊಹ್ಲಿಯ ಬ್ಯಾಟಿಂಗ್ ಫಾರ್ಮ್ ಬಗ್ಗೆ ಪರ ವಿರೋಧ ಮಾತುಗಳನ್ನು ಆಡಿದ್ದರು.

ಇದೀಗ ವಿರಾಟ್ ಕೊಹ್ಲಿ ಸುದೀರ್ಘ ವಿಶ್ರಾಂತಿಯ ನಂತರ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ. ಏಷ್ಯಾಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ವಿರಾಟ್ ಲಯಬದ್ಧವಾಗಿ ಆಡುವ ಮೂಲಕ ಮತ್ತೆ ಕಮ್ ಬ್ಯಾಕ್ ಮಾಡ್ತಾರೆ ಅನ್ನೋ ವಿಶ್ವಾಸ ಕ್ರಿಕೆಟ್ ಅಭಿಮಾನಿಗಳಲ್ಲೂ ಇದೆ.
ಇದೀಗ ಪಂದ್ಯಕ್ಕೆ ಮುನ್ನ ಬಿಸಿಸಿಐ ಬಿಗ್ ಬಾಸ್ ಸೌರವ್ ಗಂಗೂಲಿ ಅವರು ವಿರಾಟ್ ಕೊಹ್ಲಿಗೆ ಬೆಂಬಲವಾಗಿ ನಿಂತಿದ್ದಾರೆ.
ವಿರಾಟ್ ಕೊಹ್ಲಿ ತಂಡಕ್ಕಾಗಿ ರನ್ ಗಳಿಸುವುದರ ಜೊತೆಗೆ ವೈಯಕ್ತಿಕವಾಗಿ ಕೂಡ ರನ್ ಗಳಿಸಬೇಕು. ನಮಗೆ ವಿಶ್ವಾಸವಿದೆ. ವಿರಾಟ್ ಕೊಹ್ಲಿ ಮತ್ತೆ ಕಮ್ ಬ್ಯಾಕ್ ಮಾಡಿಯೇ ಮಾಡುತ್ತಾರೆ. ಈ ಋತುವಿನಲ್ಲಿ ಅದ್ಭುತವಾದ ಪ್ರದರ್ಶನ ನೀಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಗಂಗೂಲಿ ಹೇಳಿದ್ದಾರೆ.
ಏಷ್ಯಾಕಪ್ ಟೂರ್ನಿ ಆಗಸ್ಟ್ 27ರಿಂದ ಆರಂಭವಾಗಲಿದೆ. ಆಗಸ್ಟ್ 28ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆಯಲಿದೆ.