ಕಳೆದ ಬಾರಿಯ ರನ್ನರ್ಅಪ್ ರಾಜಸ್ತಾನ ರಾಯಲ್ಸ್ ತಂಡ ಇಂದು ಸನ್ರೈಸರ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ರಾಜೀವ್ ಗಾಂ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಸನ್ರೈಸರ್ಸ್ ತಂಡ ನಾಯಕ ಏಡಿನ್ ಮಾರ್ಕ್ರಮ್ ಅವರ ಅನುಪಸ್ಥಿತಿಯಲ್ಲಿ ಆಡಲಿದೆ. ಅನುಭವಿ ವೇಗಿ ಭುವನೇಶ್ವರ್ ಕುಮಾರ್ ತಂಡವನ್ನು ಮುನ್ನಡೆಸಲಿದ್ದಾರೆ.
ಉಮ್ರಾನ್ ಮಲ್ಲಿಕ್ ಹಾಗೂ ಟಿ.ನಟರಾಜನ್ ತಂಡದ ತಾರಾ ಬೌಲರ್ಗಳಾಗಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಮಯಾಂಕ್ ಅಗರ್ವಾಲ್ ಹಾಗೂ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಮೂರನೆ ಕ್ರಮಾಂಕದಲ್ಲಿ ರಾಹುಲ್ ತ್ರಿಪಾಠಿ ಕಣಕ್ಕಿಳಿಯಲಿದ್ದಾರೆ. ಹ್ಯಾರಿ ಬ್ರೂಕ್ ಕುತೂಹಲ ಮೂಡಿಸಿದ್ದಾರೆ.
ಕಳೆದ ಆವೃತ್ತಿಯಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ತಾನ ರಾಯಲ್ಸ್ ರನ್ನರ್ಅಪ್ ಆಗಿತ್ತು. ಮತ್ತೆ ಉತ್ಸಾಹದೊಂದಿಗೆ ಕಣಕ್ಕಿಳಿಯುತ್ತಿದೆ. ತಾರಾ ಬ್ಯಾಟರ್ ಜೋಸ್ ಬಟ್ಲರ್ ಹಾಗೂ ಯಶಸ್ವಿ ಜೈಸ್ವಾಲ್ ಅಗ್ರ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಅಶ್ವಿನ್, ಚಾಹಲ್ ಸ್ಪಿನ್ ಮ್ಯಾಜಿಕ್ ಮಾಡಲಿದ್ದಾರೆ. ಟ್ರೆಂಟ್ ಬೌಲ್ಟ್ ಎದುರಾಳಿ ಬ್ಯಾಟರ್ಗಳಿಗೆ ಕಂಟಕವಾಗಲಿದ್ದಾರೆ.