Syed Mushtaq Ali: ಮತ್ತೊಂದು ಗೆಲುವಿನ ವಿಶ್ವಾಸದಲ್ಲಿ ಕರ್ನಾಟಕ
ಮೊಹಾಲಿಯಲ್ಲಿ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿಯ ಎಲೈಟ್ ‘ಸಿ’ ಗುಂಪಿನ ಪಂದ್ಯದಲ್ಲಿ ಕರ್ನಾಟಕ, ಅರುಣಾಚಾಲ ಪ್ರದೇಶ ವಿರುದ್ಧ ಕಾದಾಟ ನಡೆಸಲಿದೆ.
ಮಂಗಳವಾರ ನಡೆಯಲಿರುವ ಐದನೇ ಪಂದ್ಯದಲ್ಲಿ ಮಯಾಂಕ್ ಅಗರ್ ವಾಲ್ ಮುನ್ನಡೆಯ ಕರ್ನಾಟಕ ಈ ಪಂದ್ಯದಲ್ಲಿ ಜಯ ಸಾಧಿಸಿ, ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಬಡ್ತಿ ಪಡೆಯುವ ಕನಸು ಕಾಣುತ್ತಿದೆ. ಸದ್ಯ ಕರ್ನಾಟಕ ಆಡಿರುವ ನಾಲ್ಕು ಪಂದ್ಯಗಳಲ್ಲಿ 3 ಜಯ, 1 ಸೋಲು ಕಂಡಿದ್ದು, 12 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇನ್ನು ಅರುಣಾಚಾಲ ಪ್ರದೇಶ ಆಡಿರುವ ನಾಲ್ಕು ಪಂದ್ಯಗಳನ್ನು ಸೋತು ನಿರಾಸೆ ಹೊಂದಿದೆ.
ಸಂಘಟಿತ ಪ್ರದರ್ಶನ ನೀಡಿರುವ ಕರ್ನಾಟಕ ತಂಡ, ಉತ್ತಮ ಲಯದಲ್ಲಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಸ್ಟಾರ್ ಆಟಗಾರರನ್ನು ಹೊಂದಿರುವ ರಾಜ್ಯ ತಂಡ, ಮತ್ತೊಂದು ಗೆಲುವಿನ ರಣತಂತ್ರವನ್ನು ಹೆಣೆದುಕೊಂಡಿದೆ. ಸ್ಟಾರ್ ಆಟಗಾರರಾದ ದೇವದತ್ ಪಡಿಕ್ಕಲ್, ಮಯಾಂಕ್ ಅಗರ್ ವಾಲ್, ಮನೀಷ್ ಪಾಂಡೆ, ಎಲ್ ಆರ್ ಚೇತನ್, ಅಭಿನವ್ ಮನೋಹರ್ ರನ್ ಕಲೆ ಹಾಕಿ ತಂಡಕ್ಕೆ ನೆರವಾಗಬೇಕಿದೆ. ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಮಾಡು ಕ್ಷಮತೆ ಈ ಆಟಗಾರರಿಗೆ ಇದೆ.
ಬೌಲಿಂಗ್ ವಿಭಾಗದಲ್ಲಿ ಕರ್ನಾಟಕದ ವೇಗಿಗಳು ಲಯ ಬದ್ಧ ದಾಳಿ ನಡೆಸಿ ಎದುರಾಳಿಗಳನ್ನು ಕಾಡಬಲ್ಲರು. ಸ್ಪಿನ್ ಬೌಲರ್ ಗಳು ತಮ್ಮ ಸಾಮರ್ಥ್ಯವನ್ನು ಅರಿತು ಆಡಬೇಕಿದೆ. ಅಂದಾಗ ಮಾತ್ರ ಗೆಲುವಿನ ಆಸೆ ಫಲಿಸುತ್ತದೆ.
ಅರುಣಾಚಲ ಪ್ರದೇಶ ತಂಡ ಈ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿ ಪುಟಿದೇಳುವ ಹುಮ್ಮಸ್ಸಿನಲ್ಲಿದೆ.
Syed Mushtaq Ali, Karnataka, Arunachal Pradesh