ಭಾರೀ ಮಳೆ ಹಿನ್ನೆಲೆಯಲ್ಲಿ ಗಬ್ಬಾ ಮೈದಾನದಲ್ಲಿ ನಡೆಯಬೇಕಿದ್ದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಅಭ್ಯಾಸ ಪಂದ್ಯವನ್ನು ರದ್ದು ಮಾಡಲಾಗಿದೆ.
ಮೊನ್ನೆಯಷ್ಟೆ ವಿಶ್ವಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯವನ್ನು ರೋಹಿತ್ ಪಡೆ ಕೊನೆಯ ಓವರ್ ನಲ್ಲಿ ರೋಚಕವಾಗಿ ಗೆದ್ದುಕೊಂಡಿತ್ತು. ನ್ಯೂಜಿಲೆಂಡ್ ವಿರುದ್ಧವೂ ಸಾಮರ್ಥ್ಯವನ್ನು ಸಾಬೀತುಪಡಿಸಲು ಸಜ್ಜಾಗಿತ್ತು.
ವೇಗಿ ಮೊಹ್ಮದ್ ಶಮಿ ನಾಲ್ಕು ಎಸೆತದಲ್ಲಿ 4 ವಿಕೆಟ್ ಪಡೆದು ಒಳ್ಳೆಯ ಕಮ್ ಬ್ಯಾಕ್ ಮಾಡಿದ್ದಾರೆ.
ಇನ್ನು ನ್ಯೂಜಿಲೆಂಡ್ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಕಂಡಿತ್ತು. ಇಂದು ಸಾಮರ್ಥ್ಯವನ್ನು ತೊರಿಸಲು ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳಿಗೆ ಕೊನೆಯ ಅವಕಾಶವಾಗಿತ್ತು.

ಅ.22ರಂದು ನ್ಯೂಜಿಲೆಂಡ್ ತಂಡ ತನ್ನ ಮೊದಲ ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.
ಇನ್ನು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಬದ್ಧ ವೈರಿ ಪಾಕಿಸ್ತಾನ ವಿರುದ್ಧ ಅ,23ರಂದು ಮೆಲ್ಬೊರ್ನ್ ಮೈದಾನದಲ್ಲಿ ಎದುರಿಸಲಿದೆ.