T20 WC Semi : ಪ್ರತಿಷ್ಠಿತ ಟಿ20 ವಿಶ್ವಕಪ್ ರೋಚಕ ಘಟ್ಟ ತಲುಪಿದೆ.ಭಾರತ ಮತ್ತು ಇಂಗ್ಲೆಂಡ್ ನಡುವಿನ ಕದನಕ್ಕೆ ಕ್ಷಣಗಣನೆ ಶುರುವಾಗಿದೆ. ರೋಹಿತ್ ನೇತೃತ್ವದ ತಂಡ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದೆ.
ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡ ಕೂಡ ಒಳ್ಳೆಯ ಪ್ರದರ್ಶನ ನೀಡಿ ಸೆಮಿಫೈನಲ್ ತಲುಪಿದೆ. ಇಂದಿನ ನಿರ್ಣಾಯಕ ಪಂದ್ಯದಲ್ಲಿ ಉಭಯ ತಂಡಗಳ ಸೋಲು ಗೆಲುವಿನ ಲೆಕ್ಕಾಚಾರಗಳು ಜೋರಾಗಿವೆ.
ಅಡಿಲೇಡ್ನಲ್ಲಿ ನಡೆಯುವ ಪಂದ್ಯ ಇಂಟರೆಸ್ಟಿಂಗ್ ಆಗಿದೆ. ಅಡಿಲೇಡ್ನಲ್ಲಿ ಈವರೆಗೂ 11 ಅಂತಾರಾಷ್ಟ್ರೀಯ ಟಿ20 ಪಂದ್ಯಗಳು ನಡೆದಿವೆ. ಟಾಸ್ ಗೆದ್ದ ತಂಡಕ್ಕೆ ಒಂದೂ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿಲ್ಲ.
ಈ ದಾಖಲೆ ಭಾರತದ ಗೆಲುವಿನಲ್ಲಿ ಪ್ರಮುಖವಾಗುತ್ತದೆ.ಒಂದು ವೇಳೆ ಟಾಸ್ ಗೆದ್ದು ನಾಯಕ ರೋಹಿತ್ಗೆ ಪಂದ್ಯವನ್ನು ಗೆಲ್ಲಿಸುವ ಜವಾಬ್ದಾರಿ ಇದ್ದೆ ಇರುತ್ತದೆ.
ಭಾರತಕ್ಕೆ ಇತಹಾಸ ಸೃಷ್ಟಿಸಲು ಇನ್ನು ಎರಡು ಹೆಜ್ಜೆ ದೂರ ಇದೆ. 15 ವರ್ಷಗಳ ಬಳಿಕ ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲುವ ಕನಸು ಕಂಡಿದೆ.
ಪಾಕ್ ವಿರುದ್ಧದ ಫೈನಲ್ ಪಂದ್ಯಕ್ಕೆ ಯಾರಿಗೆ ಟಿಕೆಟ್ ಸಿಗಲಿದೆ ಅನ್ನೋದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.