ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿ ಕದನಕ್ಕೆ ಇಡೀ ಜಗತ್ತು ಎದುರು ನೋಡುತ್ತಿದೆ.
ಅಡಿಲೇಡ್ನಲ್ಲಿ ಉಭಯ ತಂಡಗಳು ಭರ್ಜರಿ ಅಭ್ಯಾಸ ನಡೆಸುತ್ತಿವೆ. ಅದರಲ್ಲೂ ರನ್ ಮಷೀನ್ ವಿರಾಟ್ ಕೊಹ್ಲಿ ಮತ್ತೊಂದು ದೊಡ್ಡ ಇನ್ನಿಂಗ್ಸ್ ಆಡಲು ಸಜ್ಜಾಗುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ನೆಟ್ಸ್ ನಲ್ಲಿ ಕಠಿಣ ಅಭ್ಯಾಸ ಮಾಡಿ ಬೆವರಿಳಿಸಿದ್ದಾರೆ.
ವಿರಾಟ್ ಕೊಹ್ಲಿ ಇಂದಿನ ಪಂದ್ಯದಲ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆ. ಯಾಕಂದರೆ ಈ ಹಿಂದಿನ ಟಿ20 ವಿಶ್ವಕಪ್ನಲ್ಲಿ ವಿರಾಟ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವುದೇ ಇದಕ್ಕೆ ಸಾಕ್ಷಿಯಾಗಿದೆ.
2016ರ ಭಾರತದಲ್ಲಿ ನಡೆದ ಟಿ20 ವಿಶ್ವಕಪ್ನ ಸೆಮಿಫೈನಲ್ನಲ್ಲಿ ವಿರಾಟ್ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 89 ರನ್ ಹೊಡೆದಿದ್ದರು.
ಇದಕ್ಕೂ ಮುನ್ನ 2014ರಲ್ಲಿ ಮೀರ್ಪುರನಲ್ಲಿ ಶ್ರೀಲಂಕಾ ವಿರುದ್ಧ 58 ಎಸೆತದಲ್ಲಿ 77 ರನ್ ಹೊಡೆದಿದ್ದರು.
ಇದೇ ವರ್ಷದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 44 ಎಸೆತದಲ್ಲಿ72 ರನ್ ಚಚ್ಚಿದ್ದರು. ಆ ಪಂದ್ಯವನ್ನು ಭಾರತ ಗೆದ್ದಿತ್ತು.
ವಿಪರ್ಯಾಸವೆಂದರೆ ವೆಸ್ಟ್ಇಂಡೀಸ್ ಹಾಗೂ ಶ್ರೀಲಂಕಾ ವಿರುದ್ಧ ವಿರಾಟ್ ಭರ್ಜರಿ ಪ್ರದರ್ಶನದ ಹೊರತಾಗಿಯೂ ಭಾರತ ಸೋಲು ಕಂಡಿತ್ತು.