ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ, ಸೆಮಿಫೈನಲ್‌ನಿಂದ ಹೊರಬಿದ್ದ ನಂತರ ಬಿಸಿಸಿಐ ಹಿರಿಯ ರಾಷ್ಟ್ರೀಯ ಆಯ್ಕೆ ಸಮಿತಿಯ ಅಧ್ಯಕ್ಷ ಚೇತನ್ ಶರ್ಮಾ ಅವರನ್ನು ವಜಾ ಗೊಳಿಸಲಾಗಿದೆ. ಅಲ್ಲದೇ, ಚೇತನ್ ಶರ್ಮಾರನ್ನು ವಜಾಗೊಳಿಸಿದ ನಂತರ ಬಿಸಿಸಿಐ ಟ್ವಿಟರ್‌ನಲ್ಲಿ ರಾಷ್ಟ್ರೀಯ ಆಯ್ಕೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಭಾರತ ಹಿರಿಯ ಪುರುಷರ ತಂಡಕ್ಕೆ ರಾಷ್ಟ್ರೀಯ ಆಯ್ಕೆಗಾರರ ಸ್ಥಾನಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಪ್ರಕಟಿಸಿದೆ. ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 28ರ ಸಂಜೆ 6 ಗಂಟೆಗೆ ಕೊನೆಯ ದಿನಾಂಕ ಮತ್ತು ಸಮಯ ಎಂದು ತಿಳಿಸಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಲವು ಮಾನದಂಡಗಳನ್ನು ಪೂರೈಸಬೇಕು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
> ಅಭ್ಯರ್ಥಿಗಳು ಕನಿಷ್ಠ ಏಳು ಟೆಸ್ಟ್ ಪಂದ್ಯಗಳು, 30 ಪ್ರಥಮ ದರ್ಜೆ ಪಂದ್ಯಗಳು ಅಥವಾ 10 ODI ಮತ್ತು 20 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರಬೇಕು.
> ಅಭ್ಯರ್ಥಿಗಳು ಕನಿಷ್ಠ ಐದು ವರ್ಷಗಳ ಹಿಂದೆ ಆಟದಿಂದ ನಿವೃತ್ತರಾಗಿರಬೇಕು.