ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾ(Team India) ಸೋಲಿನ ಆಘಾತ ಅನುಭವಿಸಿದರು. ಇಡೀ ವಿಶ್ವಕಪ್ ಟೂರ್ನಿಯಲ್ಲಿ ಭಾರತ “ರನ್ ಮಷಿನ್” ವಿರಾಟ್ ಕೊಹ್ಲಿ, ತಮ್ಮ ಶ್ರೇಷ್ಠ ಪ್ರದರ್ಶನದಿಂದ “KING OF KNOCKOUT MATCHES” ಎಂಬುದನ್ನ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.
ಆಸೀಸ್ ಅಂಗಳದಲ್ಲಿ ನಡೆದ ಟಿ20 ವಿಶ್ವಕಪ್‌ನ ಆರಂಭದಿಂದಲೇ ಅದ್ಭುತ ಪ್ರದರ್ಶನ ನೀಡಿದ್ದ ಕಿಂಗ್ ಕೊಹ್ಲಿ, ಇಡೀ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ಬೆನ್ನೆಲುಬಾಗಿ ಕಾಣಿಸಿಕೊಂಡರು. ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಮಿಂಚಿದ ʼಚೇಸ್ ಮಾಸ್ಟರ್ʼ ಪ್ರಸಕ್ತ ವಿಶ್ವಕಪ್‌ನಲ್ಲಿ ಮತ್ತೊಂದು ಅರ್ಧಶತಕ ಸಿಡಿಸಿದರು. ಇದು ಪ್ರಸಕ್ತ ವಿಶ್ವಕಪ್‌ನಲ್ಲಿ ಕೊಹ್ಲಿ ಬ್ಯಾಟ್‌ನಿಂದ ಬಂದ ನಾಲ್ಕನೇ ಅರ್ಧಶತಕವಾಗಿದ್ದು, ಇಡೀ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ, 296 ರನ್‌ಗಳಿಸಿ ಗಮನ ಸೆಳೆದಿದ್ದಾರೆ.
ಇಂಗ್ಲೆಂಡ್ ವಿರುದ್ಧ ದಾಖಲಿಸಿದ ಅರ್ಧಶತಕದೊಂದಿಗೆ ವಿರಾಟ್ ಕೊಹ್ಲಿ ಭಾರತದ ಪಾಲಿಗೆ ತಾನು ʼKING OF KNOCKOUT MATCHES” ಎಂಬುದನ್ನ ಮತ್ತೊಮ್ಮೆ ಸಾಬೀತು ಮಾಡಿದರು. ODI ಹಾಗೂ T20 ವಿಶ್ವಕಪ್ ಟೂರ್ನಿಯ ನಾಕೌಟ್ ಪಂದ್ಯಗಳಲ್ಲಿ ಕಿಂಗ್ ಕೊಹ್ಲಿ, 350ಕ್ಕೂ ಹೆಚ್ಚು ರನ್‌ಗಳಿಸಿದ್ದಾರೆ. ಈ ಮೊದಲ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್, 339 ರನ್‌ಗಳಿಸುವ ಮೂಲಕ ಭಾರತದ ಪರ ವಿಶ್ವಕಪ್‌ನ ನಾಕೌಟ್ ಪಂದ್ಯಗಳಲ್ಲಿ ಹೆಚ್ಚು ರನ್‌ಗಳಿಸಿದ್ದರು.
ಇವರಿಬ್ಬರು ನಂತರದಲ್ಲಿ ವಿಶ್ವಕಪ್‌ನ ನಾಕೌಟ್ ಪಂದ್ಯಗಳಲ್ಲಿ ಹೆಚ್ಚು ರನ್‌ಗಳಿಸಿದ ಬ್ಯಾಟ್ಸ್‌ಮನ್‌ಗಳ ಲಿಸ್ಟ್‌ನಲ್ಲಿ ರೋಹಿತ್ ಶರ್ಮ(333 ರನ್) ಕಾಣಿಸಿಕೊಂಡಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್.ಧೋನಿ(303 ರನ್) ಇದ್ದಾರೆ. 5ನೇ ಸ್ಥಾನದಲ್ಲಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್(273 ರನ್) ಕಾಣಿಸಿಕೊಂಡಿದ್ದಾರೆ.