T20I CWC 2022 : ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್(World Cup)ನ ಸೂಪರ್-12(Super 12) ಪಂದ್ಯಗಳ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಗ್ರೂಪ್ ಸ್ಟೇಜ್(Group Stage) ಪಂದ್ಯಗಳಲ್ಲಿ ಎಲ್ಲಾ ತಂಡಗಳು ಭರ್ಜರಿ ಪ್ರದರ್ಶನ ನೀಡುತ್ತಿವೆ. ಈ ನಡುವೆ ಪ್ರಮುಖ ತಂಡಗಳ ನಡುವೆ ನಡೆಯುತ್ತಿರುವ ಅಭ್ಯಾಸ ಪಂದ್ಯ(Warm Up)ದಲ್ಲಿ ನಾಳೆ(ಅ.19) ಭಾರತ(Team India) ಮತ್ತು ನ್ಯೂಜಿಲೆಂಡ್(New Zealand ಜಿದ್ದಾಜಿದ್ದಿನ ಪೈಪೋಟಿ ನಡೆಸಲು ಸಜ್ಜಾಗಿವೆ.
ಉಭಯ ತಂಡಗಳಿಗೆ ಇದು ಅಂತಿಮ ಅಭ್ಯಾಸ ಪಂದ್ಯವಾಗಿದೆ. ಎರಡು ತಂಡಗಳು ಈಗಾಗಲೇ ತಲಾ ಒಂದು ಅಭ್ಯಾಸ ಪಂದ್ಯವನ್ನ ಆಡಿದ್ದು, ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸಿದ್ದರೆ. ಆದರೆ ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ನೀರಸ ಪ್ರದರ್ಶನ ನೀಡಿದ್ದ ನ್ಯೂಜಿ಼ಲೆಂಡ್, ಗೆಲುವಿನ ಹಾದಿಯ ಹುಡುಕಾಟದೊಂದಿಗೆ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಬ್ಯಾಟಿಂಗ್ ವೈಫಲ್ಯಕ್ಕೆ ಸಿಲುಕಿದ್ದ ಕಿವೀಸ್, ಕೇವಲ 98 ರನ್‌ಗಳಿಗೆ ಆಲೌಟ್ ಆಗಿತ್ತು. ನಾಯಕ ಕೇನ್ ವಿಲಿಯಂಸನ್ ಸೇರಿದಂತೆ ಎಲ್ಲಾ ಬ್ಯಾಟ್ಸ್‌ಮನ್‌ಗಳು ನಿರೀಕ್ಷಿತ ಆಟವಾಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ಬ್ಯಾಟಿಂಗ್ ವೈಫಲ್ಯ ಸರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಿವೀಸ್‌ಗೆ, ಭಾರತದ ವಿರುದ್ಧದ ಅಭ್ಯಾಸ ಪಂದ್ಯ ಅತ್ಯಂತ ಪ್ರಮುಖವಾಗಲಿದೆ.
ಮತ್ತೊಂದೆಡೆ ಮೊದಲ ಪಂದ್ಯದಲ್ಲಿ ಆಸೀಸ್ ವಿರುದ್ಧ 6 ರನ್‌ಗಳ ರೋಚಕ ಗೆಲುವು ಸಾಧಿಸಿದ್ದ ಟೀಂ ಇಂಡಿಯಾ, ಆತ್ಮವಿಶ್ವಾಸದಿಂದ ಕಣಕ್ಕಿಳಿಯಲು ಸಜ್ಜಾಗಿದೆ. ಭಾರತದ ಪರ ಕೆ.ಎಲ್.ರಾಹುಲ್, ಸೂರ್ಯಕುಮಾರ್ ಅದ್ಭುತ ಫಾರ್ಮ್‌ನಲ್ಲಿದ್ದರೆ. ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ ಕಾರ್ತಿಕ್ ಸಹ ಬ್ಯಾಟಿಂಗ್‌ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಬ್ಯಾಟಿಂಗ್ ಜೊತೆಗೆ ಭಾರತದ ಬೌಲಿಂಗ್ ಸಹ ಬಲಿಷ್ಠವಾಗಿ ಕಾಣುತ್ತಿದೆ. ಆಸೀಸ್ ವಿರುದ್ಧದ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಮಿಂಚಿದ್ದ ಮೊಹಮ್ಮದ್ ಶಮಿ, ನ್ಯೂಜಿ಼ಲೆಂಡ್ ವಿರುದ್ಧವೂ ಬೌಲಿಂಗ್ ವಿಭಾಗವನ್ನ ಮುನ್ನಡೆಸುವ ಸಾಧ್ಯತೆ ಇದೆ. ಹೀಗಾಗಿ ಅಂತಿಮ ಅಭ್ಯಾಸ ಪಂದ್ಯದಲ್ಲಿ ಎರಡು ತಂಡಗಳು ಏನೆಲ್ಲಾ ಬದಲಾವಣೆ ಹಾಗೂ ರಣತಂತ್ರದೊಂದಿಗೆ ಕಣಕ್ಕಿಳಿಯುತ್ತವೆ ಎಂಬುದನ್ನ ಕಾದು ನೋಡಬೇಕಿದೆ.
ಸಂಭಾವ್ಯ ತಂಡಗಳು:
ನ್ಯೂಜಿ಼ಲೆಂಡ್: ಮಾರ್ಟಿನ್ ಗಪ್ಟಿಲ್, ಆಡಮ್ ಮಿಲ್ನೆ, ಕೇನ್ ವಿಲಿಯಮ್ಸನ್, ಟಿಮ್ ಸೌಥಿ, ಇಶ್ ಸೋಧಿ, ಮಿಚೆಲ್ ಸ್ಯಾಂಟ್ನರ್, ಮಾರ್ಕ್ ಚಾಪ್ಮನ್, ಮೈಕೆಲ್ ಬ್ರೇಸ್ವೆಲ್, ಲಾಕಿ ಫರ್ಗುಸನ್, ಗ್ಲೆನ್ ಫಿಲಿಪ್ಸ್, ಫಿನ್ ಅಲೆನ್.
ಭಾರತ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, KL ರಾಹುಲ್, ದಿನೇಶ್ ಕಾರ್ತಿಕ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಸೂರ್ಯಕುಮಾರ್ ಯಾದವ್, ಅಕ್ಸರ್ ಪಟೇಲ್, ಹಾರ್ದಿಕ್ ಪಾಂಡ್ಯ, ಅರ್ಶದೀಪ್ ಸಿಂಗ್.