ಐಸಿಸಿ ಪುರುಷರ ಟಿ20 ವಿಶ್ವಕಪ್(World Cup) ಟೂರ್ನಿಯ ಬಹುನಿರೀಕ್ಷಿತ ಭಾರತ(India) ಹಾಗೂ ಪಾಕಿಸ್ತಾನ(Pakistan) ನಡುವಿನ ಕದನಕ್ಕೆ ಕ್ಷಣಗಣನೆ ಶುರುವಾಗಿದೆ. ಹೈ-ವೋಲ್ಟೇಜ್(High Voltage) ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿದೆ.
ಮೆಲ್ಬೋರ್ನ್‌ನ ಐತಿಹಾಸಿಕ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್(Melbourne Cricket Ground)ನಲ್ಲಿ ನಡೆಯುತ್ತಿರುವ ಸೂಪರ್-12 ಕಾಳಗಕ್ಕೆ ವೇದಿಕೆ ಸಜ್ಜಾಗಿದೆ. ಮಹತ್ವದ ಪಂದ್ಯದಲ್ಲಿ ಅಬ್ಬರದ ಪ್ರದರ್ಶನ ನೀಡಲು ಉಭಯ ತಂಡಗಳ ಆಟಗಾರರು ಸಂಪೂರ್ಣ ಸಜ್ಜಾಗಿದ್ದಾರೆ. ಎರಡು ತಂಡಗಳು ಸೂಪರ್-12 ಹಂತದ ಮೊದಲ ಪಂದ್ಯವನ್ನ ಗೆದ್ದು ಶುಭಾರಂಭ ಮಾಡುವ ತವಕದಲ್ಲಿದೆ.
ಐಸಿಸಿ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸಂಪೂರ್ಣ ಪ್ರಾಬಲ್ಯ ಸಾಧಿಸಿದ್ದು, 2021ರ ಟಿ20 ವಿಶ್ವಕಪ್ ಟೂರ್ನಿಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಕಾಯುತ್ತಿದೆ. ಮತ್ತೊಂದೆಡೆ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಗೆಲುವಿನ ಖಾತೆ ತೆರೆದಿರುವ ಪಾಕಿಸ್ತಾನ, ಇಂದಿನ ಪಂದ್ಯವನ್ನ ಗೆದ್ದು ಗೆಲುವಿನ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ಲೆಕ್ಕಾಚಾರದಲ್ಲಿದೆ. ವಿಶ್ವ ಕ್ರಿಕೆಟ್‌ನ ದಿಗ್ಗಜ ತಂಡಗಳ ನಡುವಿನ ಜಿದ್ದಾಜಿದ್ದಿನ ಪಂದ್ಯವನ್ನ ಕಣ್ತುಂಬಿಕೊಳ್ಳಲು ಲಕ್ಷಾಂತರ ಅಭಿಮಾನಿಗಳು ಮೆಲ್ಬೋರ್ನ್ ಅಂಗಳದಲ್ಲಿ ಬೀಡುಬಿಟ್ಟಿದ್ದಾರೆ.
ಉಭಯ ತಂಡಗಳು:
ಭಾರತ: ರೋಹಿತ್ ಶರ್ಮ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.
ಪಾಕಿಸ್ತಾನ: ಬಾಬರ್ ಆಜಮ್(ನಾಯಕ), ಮೊಹಮ್ಮದ್ ರಿಜ್ವಾನ್, ಶಾನ್ ಮಸೂದ್, ಹೈದರ್ ಅಲಿ, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಶದಾಬ್ ಖಾನ್, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಹ್ಯಾರಿಸ್ ರೌಫ್, ನಸೀಮ್ ಶಾ, ಶಾಹೀನ್ ಅಫ್ರಿದಿ.