ನ್ಯೂಜಿಲೆಂಡ್ ಪ್ರವಾಸದ ನಂತರ ಭಾರತ ತಂಡ ಇದೀಗ ಬಾಂಗ್ಲಾದೇಶ ಪ್ರವಾಸದಲ್ಲಿದೆ. ಟೀಂ ಇಂಡಿಯಾ ಈ ವೇಳೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಬೇಕಿದೆ. ಇದು ಡಿಸೆಂಬರ್ 4 ರಿಂದ ಪ್ರಾರಂಭವಾಗಲಿದೆ. ಈ ಸರಣಿಗಾಗಿ ಭಾರತ ತಂಡ ಬಾಂಗ್ಲಾದೇಶ ತಲುಪಿದೆ. ಇದೇ ವೇಳೆ ಭಾರತ ತಂಡ ಇಂದಿನಿಂದ ಅಭ್ಯಾಸ ಆರಂಭಿಸಲಿದೆ.
ರೋಹಿತ್ ಶರ್ಮಾ ಅಂಡ್ ಕೋ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು ಭಾನುವಾರ ಡಿಸೆಂಬರ್ 4 ರಂದು ಆಡಲಿದೆ. ಈ ಸರಣಿಗಾಗಿ ಟೀಂ ಇಂಡಿಯಾ ಡಿಸೆಂಬರ್ 2 ಶುಕ್ರವಾರದಿಂದ ಅಭ್ಯಾಸ ಆರಂಭಿಸಲಿದೆ. ಬಾಂಗ್ಲಾದೇಶ ವಿರುದ್ಧದ ಈ ಸರಣಿಗೆ ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ ವಾಪಸಾಗುತ್ತಿದ್ದಾರೆ. ಟಿ20 ವಿಶ್ವಕಪ್ ಬಳಿಕ ಈ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಈ ಕಾರಣಕ್ಕಾಗಿ ಅವರು ನ್ಯೂಜಿಲೆಂಡ್ ಪ್ರವಾಸದಲ್ಲಿ ಟಿ20 ಮತ್ತು ಏಕದಿನ ಸರಣಿಯಲ್ಲಿ ಆಡಿರಲಿಲ್ಲ.
ಟೀಂ ಇಂಡಿಯಾ ಆಟಗಾರರು ಗುರುವಾರ ಬಾಂಗ್ಲಾದೇಶ ತಲುಪಿದ್ದಾರೆ. ಮುಂಬೈನಿಂದ ಭಾರತ ತಂಡ ಬಾಂಗ್ಲಾದೇಶಕ್ಕೆ ತೆರಳಿತು. ಕೊಹ್ಲಿ, ರೋಹಿತ್ ಸೇರಿದಂತೆ ಟೀಂ ಇಂಡಿಯಾದ ಎಲ್ಲ ಆಟಗಾರರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಇದೇ ವೇಳೆ ಆಟಗಾರರಿಗೆ ಹೂಗುಚ್ಛಗಳನ್ನು ನೀಡಲಾಯಿತು. ಭಾರೀ ಭದ್ರತೆಯೊಂದಿಗೆ ಟೀಂ ಇಂಡಿಯಾ ಆಟಗಾರರನ್ನು ಏರ್‌ಪೋರ್ಟ್‌ನಿಂದ ಹೋಟೆಲ್‌ಗೆ ಕರೆದೊಯ್ಯಲಾಯಿತು.
Team India, Bangladesh, ODI