Team india – ಅಕ್ಷರ್ ಪಟೇಲ್ ಫಿಟ್ – ಟೀಮ್ ಇಂಡಿಯಾದಿಂದ ಹೊರನಡೆದ ಕುಲದೀಪ್ ಯಾದವ್..!

ಆಲ್ ರೌಂಡರ್ ಅಕ್ಷರ್ ಪಟೇಲ್ ಫಿಟ್ ಆಗಿದ್ದಾರೆ. ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ.
ಇನ್ನೊಂದೆಡೆ ಅಕ್ಷರ್ ಪಟೇಲ್ ಟೀಮ್ ಇಂಡಿಯಾಗೆ ಆಯ್ಕೆಯಾಗುತ್ತಿದ್ದಂತೆ ಕುಲದೀಪ್ ಯಾದವ್ ತಂಡದಿಂದ ಹೊರನಡೆಯಬೇಕಾಯ್ತು. ಆದ್ರೆ ಅಕ್ಷರ್ ಪಟೇಲ್ 11ರ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುತ್ತಾರಾ ಅನ್ನೋದನ್ನು ಕಾದು ನೋಡಬೇಕು. ಯಾಕಂದ್ರೆ ಆಲ್ ರೌಂಡರ್ ಗಳಾದ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅದ್ಭುತವಾದ ಫಾರ್ಮ್ ನಲ್ಲಿದ್ದಾರೆ. ಇನ್ನು ಲಲಿತ್ ಯಾದವ್ ಸ್ಥಾನದಲ್ಲಿ ಅಕ್ಷರ್ ಪಟೇಲ್ ಆಡುವ ಸಾಧ್ಯತೆಗಳಿವೆ.
ಕಳೆದ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆಯಲ್ಲಿ ಅಕ್ಷರ್ ಪಟೇಲ್ ಅವರು ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದರು. ಬಳಿಕ ವೆಸ್ಟ್ ಇಂಡೀಸ್ ಸರಣಿಯ ವೇಳೆ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದರು. Team india -Fit-again Axar patel replaces Kuldeep yadav for 2nd SL Test
ಹೀಗಾಗಿ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಅಕ್ಷರ್ ಪಟೇಲ್ ಅಲಭ್ಯರಾಗಿದ್ದರು. ಇದೀಗ ಗಾಯ ಮತ್ತು ಕೋವಿಡ್ ನಿಂದ ಪೂರ್ತಿಯಾಗಿ ಚೇತರಿಸಿಕೊಂಡು ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ.
ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಮಾರ್ಚ್ 12ರಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಈ ಪಂದ್ಯ ಹೊನಲು ಬೆಳಕಿನಲ್ಲಿ ನಡೆಯಲಿದೆ.
ಈಗಾಗಲೇ ಎರಡು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0ಯಿಂದ ಮುನ್ನಡೆ ಪಡೆದುಕೊಂಡಿದೆ.