ಟೀಮ್ ಇಂಡಿಯಾ ಈಗ ಮೂರು ಆವೃತ್ತಿಗಳಲ್ಲೂ ವಿಶ್ವ ಸಾಮ್ರಾಟನಾಗಿ ಹೊರಹೊಮ್ಮಿದೆ.
ಟೆಸ್ಟ್, ಏಕದಿನ ಮತ್ತು ಟಿ20 ಆವೃತ್ತಿಗಳಲ್ಲಿ ನಂ.1 ತಂಡವಾಗಿ ಹೊರಹೊಮ್ಮಿದೆ.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗಾವಸ್ಕರ್ ಟೆಸ್ಟ್ ಸರಣಿಗೂ ಮುನ್ನ ಏಕದಿನ ಮತ್ತು ಟಿ20 ಆವೃತ್ತಿಗಳಲ್ಲಿ ನಂ.1 ಆಗಿತ್ತು.
ಮೊನ್ನೆ ನಾಗ್ಪುರ ಟೆಸ್ಟ್ ಪಂದ್ಯದಲ್ಲಿ 132 ರನ್ ಜೊತೆಗೆ ಇನ್ನಿಂಗ್ಸ್ ಜಯ ಸಾಧಿಸಿತ್ತು. ಇದರ ಫಲವಾಗಿ ಭಾರತ ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಪಟ್ಟ ಪಡೆದಿದೆ.
ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಸೋಲು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸೋಲಿನ ಹೊರತಾಗಿಯೂ ಕಳೆದ ಎರಡು ವರ್ಷಗಳಿಂದ ಟೆಸ್ಟ್ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪ್ರಾಬಲ್ಯ ಮೆರೆದಿದೆ.
ಈ ವರ್ಷ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನೂ ಕ್ಲೀನ್ ಸ್ವೀಪ್ ಮಾಡಿದೆ.
ಭಾರತಕ್ಕೀಗ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಅರ್ಹತೆ ಪಡೆಯಲು ಅವಕಾಶ ಸಿಕ್ಕಿದ್ದು ಆಸ್ಟ್ರೇಲಿಯಾ ವಿರುದ್ಧ 3-1 ಅಂತರದಿಂದ ಸರಣಿ ಗೆಲ್ಲಬೇಕಿದೆ.