ಮೊಹಾಲಿ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ದಾಖಲಿಸಿದ ಮೇಲೆ ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆಯುವ 2ನೇ ಟೆಸ್ಟ್ ಪಂದ್ಯದ ಮೇಲೆ ಕ್ರಿಕೆಟ್ ಅಭಿಮಾನಿಗಳ ಕಣ್ಣಿದೆ. ಭಾರತ ಕ್ಲೀನ್ ಸ್ವೀಪ್ ಮಾಡುವ ಕನಸು ಕಾಣುತ್ತಿದೆ.
2ನೇ ಟೆಸ್ಟ್ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಮಾರ್ಚ್ 12 ರಿಂದ ನಡೆಯಲಿದೆ. ಇದು ಡೇ-ನೈಟ್ ಟೆಸ್ಟ್ ಪಂದ್ಯ ಆಗಿರುವುದರಿಂದ ಮಧ್ಯಾಹ್ನ 12 ಗಂಟೆಗೆ ಪಂದ್ಯ ಆರಂಭವಾಗಲಿದೆ. ರಾತ್ರಿ 10 ಗಂಟೆಗ ದಿನದ ಆಟ ಮುಗಿಯಲಿದೆ.
ಇದು ಭಾರತದಲ್ಲಿ ನಡೆಯುವ 3ನೇ ಡೇ-ನೈಟ್ ಟೆಸ್ಟ್ ಪಂದ್ಯ ಆಗಿರಲಿದೆ. ಈ ಹಿಂದೆ ಕೊಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ಬಾಂಗ್ಲಾದೇಶ ವಿರುದ್ಧ ಪಿಂಚ್ ಬಾಲ್ ಟೆಸ್ಟ್ ಆಡಲಾಗಿತ್ತು. ಅದಾದ ಮೇಲೆ ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ವಿರುದ್ಧ ಡೇ-ನೈಟ್ ಟೆಸ್ಟ್ ಆಡಲಾಗಿತ್ತು. ಈಗ ಚಿನ್ನಸ್ವಾಮಿ ಮೈದಾನದಲ್ಲಿ 3ನೇ ಪಿಂಕ್ ಬಾಲ್ ಟೆಸ್ಟ್ ನಡೆಯಲಿದೆ.