team india ODI squad – ವೆಸ್ಟ್ ಇಂಡೀಸ್ ಸರಣಿಗೆ ಟೀಮ್ ಇಂಡಿಯಾದ ಏಕದಿನ ತಂಡ, ರವಿ ಬಿಷ್ಣೋಯ್ ಹೊಸ ಮುಖ
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ-20 ಸರಣಿಗೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾದ ಏಕದಿನ ತಂಡದಲ್ಲಿ ಯುವ ಸ್ಪಿನ್ನರ್ ರವಿ ಬಿಷ್ಣೋಯ್ ಹೊಸ ಮುಖವಾಗಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಹಾಗೇ ಕುಲದೀಪ್ ಯಾದವ್ ಕೂಡ ಮತ್ತೆ ಟೀಮ್ ಇಂಡಿಯಾದ ಏಕದಿನ ತಂಡವನ್ನು ಸೇರಿಕೊಂಡಿದ್ದಾರೆ.
ವೇಗಿಗಳಾದ ಜಸ್ಪ್ರಿತ್ ಬೂಮ್ರಾ ಮತ್ತು ಮಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ಹಿರಿಯ ಸ್ಪಿನ್ನರ್ ಆರ್. ಅಶ್ವಿನ್ ಏಕದಿನ ಮತ್ತು ಟಿ-20 ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ವಿಫಲರಾಗಿದ್ದಾರೆ.
ಫೆಬ್ರವರಿ 6ರಿಂದ 20ರವರೆಗೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರು ಏಕದಿನ ಹಾಗೂ ಮೂರು ಟಿ-20 ಪಂದ್ಯಗಳು ನಡೆಯಲಿವೆ. ಏಕದಿನ ಸರಣಿಯ ಮೂರು ಪಂದ್ಯಗಳು ಅಹಮದಾಬಾದ್ ನಲ್ಲಿ ನಡೆದ್ರೆ, ಟಿ-20 ಪಂದ್ಯಗಳು ಕೊಲ್ಕತ್ತಾದಲ್ಲಿ ನಡೆಯಲಿದೆ.
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕುಲದೀಪ್ ಯಾದವ್ ತಂಡದೊಳಗೆ ಸರಿಯಾದ ಸ್ಥಾನಮಾನವಿರಲಿಲ್ಲ. ಇದೀಗ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ. ಹಾಗೇ ಆವೇಶ್ ಖಾನ್ ಮತ್ತು ಹರ್ಷಲ್ ಪಟೇಲ್ ಅವರು ಟಿ-20 ತಂಡಕ್ಕೆ ಆಯ್ಕೆಯಾಗಿದ್ದಾರೆ. ಭುವನೇಶ್ವರ್ ಕುಮಾರ್ ಏಕದಿನ ತಂಡದಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಆದ್ರೆ ಟಿ-20 ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
team india – Ravi Bishno gets maiden call-up, Kuldeep returns for WI series
ಇನ್ನೊಂದೆಡೆ ಉಪನಾಯಕ ಕೆ.ಎಲ್. ರಾಹುಲ್ ಅವರು ಮೊದಲ ಏಕದಿನ ಪಂದ್ಯಕ್ಕೆ ಗೈರಾಗಿದ್ದಾರೆ. ಕುಟುಂಬದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದರಿಂದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಆದ್ರೆ ಎರಡನೇ ಏಕದಿನ ಪಂದ್ಯಕ್ಕೆ ತಂಡವನ್ನು ಸೇರಿಕೊಳ್ಳಲಿದ್ದಾರೆ.
ವೆಸ್ಟ್ ಇಂಡಿಸ್ ಸರಣಿಗೆ ಟೀಮ್ ಇಂಡಿಯಾದ ಏಕದಿನ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್, ದೀಪಕ್ ಚಾಹರ್, ಶಾರ್ದೂಲ್ ಥಾಕೂರ್, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮಹಮ್ಮದ್ ಸೀರಾಜ್, ಪ್ರಸಿದ್ದ್ ಕೃಷ್ಣ , ಆವೇಶ್ ಖಾನ್