Team India – ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಧವನ್ ನಾಯಕ. ಅಯ್ಯರ್ ಉಪನಾಯಕ..!
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಮ್ ಇಂಡಿಯಾದ ಪ್ರತ್ಯೇಕ ತಂಡವನ್ನು ಆಯ್ಕೆ ಮಾಡಲಾಗಿದೆ.
ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಶ್ರೇಯಸ್ ಅಯ್ಯರ್ ಅವರು ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.
ಇನ್ನು ಟೀಮ್ ಇಂಡಿಯಾದ ವಿಶ್ವಕಪ್ ತಂಡ ಅಕ್ಟೋಬರ್ 6ರಂದು ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸುವುದು ಖಚಿತವಾಗಿದೆ. ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾದ ತರಬೇತಿ ಶಿಬಿರ ನಡೆಯಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಅಕ್ಟೋಬರ್ 6ರಂದು ನಡೆಯಲಿದೆ. ಅಕ್ಟೋಬರ್ 11ರಂದು ಕೊನೆಯ ಪಂದ್ಯ ನಡೆಯಲಿದೆ.
ಟೀಮ್ ಇಂಡಿಯಾದ ಏಕದಿನ ತಂಡ ಹೀಗಿದೆ..!
ಶಿಖರ್ ಧವನ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ರಜತ್ ಪಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶಾನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಹಬಾಝ್ ಅಹ್ಮದ್, ಶಾರ್ದೂಲ್ ಥಾಕೂರ್, ಕುಲದೀಪ್ ಸೇನ್, ರವಿ ಬಿಷ್ಣೋಯ್, ಮುಕೇಶ್ ಕುಮಾರ್, ಆವೇಶ್ ಖಾನ್, ಮಹಮ್ಮದ್ ಸೀರಾಜ್, ದೀಪಕ್ ಚಾಹರ್.