Team India – ಕೆ.ಎಲ್. ರಾಹುಲ್ ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ..!
ಗಾಯದಿಂದ ಬಳಲುತ್ತಿರುವ ಟೀಮ್ ಇಂಡಿಯಾದ ಉಪ ನಾಯಕ ಕೆ.ಎಲ್. ರಾಹುಲ್ ಅವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.
ಜರ್ಮನಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆ.ಎಲ್. ರಾಹುಲ್ ತೊಡೆ ಸಂದು ನೋವಿನಿಂದ ಬಳಲುತ್ತಿದ್ದಾರೆ.
ಎಲ್ಲರಿಗೂ ನಮಸ್ಕಾರ… ಕೆಲವು ವಾರಗಳ ಮಟ್ಟಿಗೆ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಿದೆ. ಆದ್ರೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ನಾನು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದೇನೆ. ಎಲ್ಲರಿಗೂ ಕೃತಜ್ಞತೆಗಳು ಎಂದು ಕೆ.ಎಲ್. ರಾಹುಲ್ ತನ್ನ ಸಾಮಾಜಿಕ ಜಾಲ ತಾಣದಲ್ಲಿ ಬರೆದುಕೊಂಡಿದ್ದಾರೆ.
ಕೆ.ಎಲ್. ರಾಹುಲ್ ಅವರು ಇನ್ನೂ ಒಂದು ತಿಂಗಳುಗಳ ಕಾಲ ಜರ್ಮನಿಯಲ್ಲೇ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ. Team India – Surgery Done. Rahul On Road To Recovery
ಐಪಿಎಲ್ ಬಳಿಕ ಗಾಯಗೊಂಡಿದ್ದ ಕೆ.ಎಲ್. ರಾಹುಲ್ ಅವರು ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದ್ದರು. ಈ ವೇಳೆ ಕೆ.ಎಲ್. ರಾಹುಲ್ ಎನ್ ಸಿಎನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದಾದ ನಂತರ ಇಂಗ್ಲೆಂಡ್ ಸರಣಿಗೆ ಆಯ್ಕೆಯಾಗಿದ್ದರು. ಆದ್ರೆ ಪೂರ್ತಿಯಾಗಿ ಗುಣಮುಖರಾಗದ ಕಾರಣ ಇಂಗ್ಲೆಂಡ್ ಪ್ರವಾಸದಿಂದಲೂ ಹೊರಗುಳಿದಿದ್ದಾರೆ.
ಟೀಮ್ ಇಂಡಿಯಾದ ಭವಿಷ್ಯದ ನಾಯಕ ಎಂದೇ ಬಿಂಬಿತವಾಗಿದ್ದ ಕೆ.ಎಲ್. ರಾಹುಲ್ ಅವರು ಪದೇ ಪದೇ ಗಾಯಕ್ಕೆ ತುತ್ತಾಗುತ್ತಿದ್ದಾರೆ.
ಇನ್ನು ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಅಲ್ಲದೆ ಬ್ಯಾಟಿಂಗ್ ನಲ್ಲೂ ಅದ್ಭುತ ಪ್ರದರ್ಶನವನ್ನು ನೀಡಿದ್ದರು.