Team india – ಅಭ್ಯಾಸ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಸೂರ್ಯ- ಪಂತ್, ರೋಹಿತ್ ಠುಸ್ಸ್..!
ಟೀಮ್ ಇಂಡಿಯಾದ ಮ್ಯಾಚ್ ವಿನ್ನರ್ ಸೂರ್ಯ ಕುಮಾರ್ ಯಾದವ್ ಅವರು ಅಭ್ಯಾಸ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚು ಹರಿಸಿದ್ದಾರೆ.
ಅಕ್ಟೋಬರ್ 10ರಂದು ಪರ್ತ್‍ನ ವಾಕಾ ಅಂಗಣದಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಸೂರ್ಯ ಕುಮಾರ್ ಅವರು, ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಆಟವನ್ನಾಡಿದ್ರು. ಸೂರ್ಯ ಕುಮಾರ್ ಯಾದವ್ 35 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್ ಗಳ ಸಹಾಯದಿಂದ 52 ರನ್ ಗಳಿಸಿದ್ರು. ಇನ್ನೊಂದೆಡೆ. ಹಾರ್ದಿಕ್ ಪಾಂಡ್ಯ 20 ಎಸೆತಗಳಲ್ಲಿ 29 ರನ್ ಗಳಿಸಿದ್ರೆ, ದೀಪಕ್ ಹೂಡಾ 22 ರನ್ ಗಳಿಸಿದ್ರು. ಅಂತಿಮವಾಗಿ ಟೀಮ್ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತ್ತು.
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ಅವ್ರಿಗೆ ವಿಶ್ರಾಂತಿ ನೀಡಲಾಗಿತ್ತು. ಅಲ್ಲದೆ ರೋಹಿತ್ ಶರ್ಮಾ ಮತ್ತು ರಿಷಬ್ ಪಂತ್ ಇನಿಂಗ್ಸ್ ಆರಂಭಿಸಿದ್ರು. ಆದ್ರೆ ಇವರಿಬ್ಬರು ನಿರಾಸೆ ಅನುಭವಿಸಿದ್ರು.
ಐಸಿಸಿ ವಿಶ್ವಕಪ್ ಅಭ್ಯಾಸ ಪಂದ್ಯಕ್ಕೆ ಮುನ್ನ ಟೀಮ್ ಇಂಡಿಯಾ ಇನ್ನೊಂದು ಅಭ್ಯಾಸ ಪಂದ್ಯವನ್ನು ವೆಸ್ಟರ್ನ್ ಆಸ್ಟ್ರೇಲಿಯಾ ತಂಡದ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 13ರಂದು ನಡೆಯಲಿದೆ.
ಹಾಗೇ ಅಕ್ಟೋಬರ್ 17 ಮತ್ತು 19 ರಂದು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧ ವಿಶ್ವಕಪ್ ಅಭ್ಯಾಸ ಪಂದ್ಯವನ್ನು ಟೀಮ್ ಇಂಡಿಯಾ ಆಡಲಿದೆ.
ಅಕ್ಟೋಬರ್ 23ರಂದು ಈ ಬಾರಿಯ ವಿಶ್ವಕಪ್ ಟೂರ್ನಿಯ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಇಡೀ ಕ್ರಿಕೆಟ್ ಜಗತ್ತೇ ಕಾತರದಿಂದ ಕಾಯುತ್ತಿದೆ.