ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ತವರಿನ ಸರಣಿಗೆ ತಯಾರಿ ಆರಂಭಿಸಿದೆ. ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಹೊನಲು ಬೆಳಕಿನಲ್ಲಿ ಅಭ್ಯಾಸ ಮಾಡುತ್ತಿದೆ. ಕೋಚ್ ರಾಹುಲ್ ದ್ರಾವಿಡ್ ಗರಡಿಯಲ್ಲಿ ಕೆ.ಎಲ್ ರಾಹುಲ್ ನಾಯಕತ್ವದ ತಂಡ ಪಳಗುತ್ತಿದೆ. ತವರಿನಲ್ಲಿ ಸರಣಿ ಸೋಲದ ಇತಿಹಾಸವನ್ನು ಮುಂದುವರೆಸಲು ಪ್ಲಾನ್ ಮಾಡಿದೆ.
ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡಿ ತಂಡಕ್ಕೆ ವಾಪಾಸಾಗಿರುವ ದಿನೇಶ್ ಕಾರ್ತಿಕ್ ಫಿನಿಷರ್ ಆಗಿ ಆಡುವುದು ಖಚಿತ. ಇಶಾನ್ ಕಿಶನ್ , ಆವೇಶ್ ಖಾನ್, ಋುತುರಾಜ್ ಗಾಯಕ್ವಾಡ್, ಉಮ್ರಾನ್ ಮಲಿಕ್, ಅರ್ಶದೀಪ್ ಸಿಂಗ್ ಸೇರಿದಂತೆ ಹಲವು ಯುವ ಆಟಗಾರರು ವಿಶ್ವಕಪ್ಗೆ ಸ್ಥಾನ ಗಟ್ಟಿ ಮಾಡಿಕೊಳ್ಳಲು ಶ್ರಮಿಸುತ್ತಿದ್ದಾರೆ.
ಕೆ ಎಲ್ ರಾಹುಲ್(ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶಾನ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ರವಿ ಬಿಶ್ನೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್,