ದಕ್ಷಿಣ ಆಫ್ರಿಕಾ ತಲುಪಿದ ಟೀಮ್ ಇಂಡಿಯಾಗೆ ಅದ್ದೂರಿ ಸ್ವಾಗತ…! Team India
ಗೊಂದಲದ ಗೂಡಾಗಿರುವ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ತಲುಪಿದೆ. ಟೀಮ್ ಇಂಡಿಯಾಗೆ ದಕ್ಷಿಣ ಆಫ್ರಿಕಾದ ಸಾಂಸ್ಕøತಿಕ ನೃತ್ಯದ ಮೂಲಕ ಸ್ವಾಗತಿಸಲಾಗಿದೆ. ಈ ವಿಚಾರವನ್ನು ಬಿಸಿಸಿಐ ತನ್ನ ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋ ಮೂಲಕ ಶೇರ್ ಮಾಡಿಕೊಂಡಿದೆ.
ಡಿಸೆಂಬರ್ 26ರಿಂದ ನಡೆಯಲಿರುವ ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ಸಾರಥ್ಯ ವಹಿಸಲಿದ್ದಾರೆ.
ಮೂರು ಟೆಸ್ಟ್ ಪಂದ್ಯಗಳ ಸರಣಿಯನ್ನು ಗೆದ್ದು ಇತಿಹಾಸ ನಿರ್ಮಿಸುವ ಅವಕಾಶ ವಿರಾಟ್ ಬಳಗಕ್ಕಿದೆ. ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಮ್ ಇಂಡಿಯಾ 20 ಪಂದ್ಯಗಳನ್ನು ಆಡಿದೆ. ಇದರಲ್ಲಿ ಗೆದ್ದಿರುವುದು ಬರೀ ಮೂರು ಪಂದ್ಯಗಳನ್ನು ಮಾತ್ರ. ಹೀಗಾಗಿ ಈ ಸರಣಿ ವಿಶ್ವದ ನಂಬರ್ ವನ್ ಟೆಸ್ಟ್ ತಂಡವಾಗಿರುವ ಟೀಮ್ ಇಂಡಿಯಾಗೆ ಪ್ರತಿಷ್ಢೆಯ ಪಣವಾಗಿದೆ.
ಈಗಾಗಲೇ ಬಿಸಿಸಿಐ ಮತ್ತು ವಿರಾಟ್ ನಡುವಿನ ಶೀತಲ ಸಮರ ನಡೆಯುತ್ತಿದೆ. ಮತ್ತೊಂದೆಡೆ ವಿರಾಟ್ ಬ್ಯಾಟ್ ನಿಂದ ಶತಕ ಸಿಡಿಯದೇ ಎರಡು ವರ್ಷಗಳಾಗಿವೆ. ಎಲ್ಲಾ ಟೀಕೆ, ಪ್ರಶ್ನೆಗಳಿಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಉತ್ತರ ನೀಡುವ ವಿಶ್ವಾಸದಲ್ಲಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಮತ್ತೆ ನಂಬರ್ ವನ್ ಸ್ಥಾನಕ್ಕೇರಿರುವ ಟೀಮ್ ಇಂಡಿಯಾ ಹೇಳಿಕೊಳ್ಳುವುದಕ್ಕೆ ಬಲಿಷ್ಠವಾಗಿದೆ.
ಆದ್ರೆ ಕಳಪೆ ಫಾರ್ಮ್ ನಲ್ಲಿದ್ದಾರೆ. ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆಗೆ ಈ ಸರಣಿ ಮಾಡು ಇಲ್ಲವೇ ಮಡಿ ಎಂಬಂತಾಗಿದೆ.
ಇನ್ನುಳಿದಂತೆ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಬೇಕಾದ್ರೆ ಎಲ್ಲಾ ಆಟಗಾರರಿಗೂ ಈ ಸರಣಿ ಅಗ್ನಿ ಪರೀಕ್ಷೆಯಾಗಲಿದೆ.
ಅದೇ ರೀತಿ ಹೆಡ್ ಕೋಚ್ ರಾಹುಲ್ ದ್ರಾವಿಡ್ ಅವರಿಗೂ ಇದು ಸವಾಲಿನ ಸರಣಿಯಾಗಲಿದೆ. ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆದ್ರೂ ವಿದೇಶಿ ನೆಲದಲ್ಲಿ
ಸರಣಿ ಗೆದ್ದು ಬೀಗುವುದು ಸವಾಲಿನ ಕೆಲಸ. ಅದೂ ಕೂಡ ದಕ್ಷಿಣ ಆಫ್ರಿಕಾ ನೆಲದಲ್ಲಿ.
ಇನ್ನೊಂದೆಡೆ ದಕ್ಷಿಣ ಆಫ್ರಿಕಾದಲ್ಲಿ ಒಮ್ರಿಕಾನ್ ಸೋಂಕು ಕೂಡ ಹೆಚ್ಚಳವಾಗಿದೆ. ಹೀಗಾಗಿ ಆಟಗಾರರು ಜೈವಿಕ ಸುರಕ್ಷತೆಯಡಿಯಲ್ಲಿರಲಿದ್ದಾರೆ.
ಒಟ್ಟಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಮತ್ತು ಏಕದಿನ ಸರಣಿ ಟೀಮ್ ಇಂಡಿಯಾದಲ್ಲಿನ ಗೊಂದಲಗಳನ್ನು ಬಗೆ ಹರಿಸಲಿ ಎಂಬುದೇ ಕ್ರಿಕೆಟ್ ಅಭಿಮಾನಿಗಳ ಆಶಯ. ಇಲ್ಲಿ ಆಟಕ್ಕಿಂತ ಹೆಚ್ಚು ಆಟಗಾರರು ಅಲ್ಲ ಎಂಬುದನ್ನು ತಿಳಿದುಕೊಳ್ಳುವುದು ಒಳಿತು.