Team india Vs South Africa 2nd ODI – ದೀಪಕ್ ಚಾಹರ್ ಸ್ಥಾನಕ್ಕೆ ವಾಷಿಂಗ್ಟನ್ ಸುಂದರ್ ಆಯ್ಕೆ..!

ಸುದೀರ್ಘ ದಿನಗಳ ನಂತರ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರು ಟೀಮ್ ಇಂಡಿಯಾದೊಳಗೆ ಸೇರಿಕೊಂಡಿದ್ದಾರೆ.
ಆಲ್ ರೌಂಡರ್ ದೀಪಕ್ ಚಾಹರ್ ಅವರು ಮತ್ತೆ ಗಾಯಗೊಂಡಿದ್ದಾರೆ. ಹೀಗಾಗಿ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ದೀಪಕ್ ಚಾಹರ್ ಸ್ಥಾನಕ್ಕೆ ವಾಷಿಂಗ್ಟನ್ ಸುಂದರ್ ಅವರನ್ನು ಆಯ್ಕೆ ಮಾಡಲಾಗಿದೆ.
ದೀಪಕ್ ಚಾಹರ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಟಿ-ಸರಣಿಯ ಮೂರನೇ ಪಂದ್ಯದ ವೇಳೆ ಗಾಯಗೊಂಡಿದ್ದರು. ದೀಪಕ್ ಚಾಹರ್ ಮತ್ತೆ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಡಿರಲಿಲ್ಲ.
ದೀಪಕ್ ಚಾಹರ್ ಅವರು ಮತ್ತೆ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯನ್ನು ಸೇರಿಕೊಂಡಿದ್ದಾರೆ. ಅಲ್ಲದೆ ಚಾಹರ್ ಅವರು ಟಿ-20 ತಂಡದಲ್ಲಿ ಕಾಣಿಸಿಕೊಳ್ಳುತ್ತಿಲ್ಲ.
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯ ಅಕ್ಟೋಬರ್ 9ರಂದು ರಾಂಚಿಯಲ್ಲಿ ನಡೆಯಲಿದೆ. ಅಂತಿಮ ಪಂದ್ಯ ದೆಹಲಿಯಲ್ಲಿ ಅಕ್ಟೋಬರ್ 11ರಂದು ನಡೆಯಲಿದೆ.
ಟೀಮ್ ಇಂಡಿಯಾದ ಏಕದಿನ ತಂಡ
ಶಿಖರ್ ಧವನ್ (ನಾಯಕ), ರುತುರಾತ್ ಗಾಯಕ್ವಾಡ್, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್ (ಉಪನಾಯಕ), ರಜತ್ ಪಟೀದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶಾನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಹಬಾಝ್ ಅಹಮ್ಮದ್, ಶಾರ್ದೂಲ್ ಥಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಕೇಶ್ ಕುಮಾರ್, ಅವೇಶ್ ಖಾನ್, ಮಹಮ್ಮದ್ ಸೀರಾಜ್, ವಾಷಿಂಗ್ಟನ್ ಸುಂದರ್.