ಜೂನ್ ತಿಂಗನಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವು ಭಾರತ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾದಲ್ಲಿ ದಕ್ಷಿಣ ಆಫ್ರಿಕಾ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಭಾರತ ಎದುರಿನ 5 ಪಂದ್ಯಗಳ ಟಿ20 ಸರಣಿಯು ಜೂನ್ 09ರಿಂದ ಆರಂಭವಾಗಲಿದ್ದು, ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಸೇರಿದಂತೆ 5 ಸ್ಥಳಗಳಲ್ಲಿ 5 ಪಂದ್ಯಗಳು ನಡೆಯಲಿವೆ.
ಐಪಿಎಲ್ ಫೈನಲ್ ಮುಗಿದು 10 ದಿನ ಕಳೆಯುವಷ್ಟರಲ್ಲಿ ಭಾರತ ಕ್ರಿಕೆಟ್ ತಂಡವು ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ 5 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ಎರಡು ಬಲಿಷ್ಠ ತಂಡಗಳ ನಡುವಿನ ಪೈಪೋಟಿ 5 ಸ್ಟೇಡಿಯಂಗಳು ಸಾಕ್ಷಿಯಾಗಲಿವೆ.
5 ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಇದೀಗ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೊದಲ ಟಿ20 ಪಂದ್ಯವು ಜೂನ್ 09ರಂದು ನವ ದೆಹಲಿಯಲ್ಲಿರುವ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. 2ನೇ ಪಂದ್ಯ ಕಟಕ್ನ ಭಾರಾಮತಿ ಮೈದಾನದಲ್ಲಿ ನಡೆದರೆ, ವಿಶಾಖಪಟ್ಟಣಂನಲ್ಲಿ 3ನೇ ಮ್ಯಾಚ್ ನಡೆಯಲಿದೆ. 4ನೇ ಪಂದ್ಯ ರಾಜ್ ಕೋಟ್ನಲ್ಲಿ ನಡೆದರೆ, 5ನೇ ಹಾಗೂ ಕೊನೆಯ ಟಿ20 ಪಂದ್ಯವು ಜೂನ್ 19ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ
ಈ ಟಿ20 ಸರಣಿಯು ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಪೂರ್ವಭಾವಿ ತಯಾರಿ ಎನಿಸಿದೆ.