VVS Laxman – ಟೀಮ್ ಇಂಡಿಯಾ ಆಯ್ಕೆ ಮಾಡೋದು ಆಯ್ಕೆ ಸಮಿತಿಗೆ ಕಠಿಣ ಸವಾಲು
ಟೀಮ್ ಇಂಡಿಯಾದ ಆಯ್ಕೆ ಪ್ರಕ್ರಿಯೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ. ತಂಡಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಸಾಕಷ್ಟು ಗೊಂದಲಗಳು ಉಂಟಾಗುತ್ತಿವೆ. ಯಾಕಂದ್ರೆ ಭಾರತೀಯ ಕ್ರಿಕೆಟ್ ನಲ್ಲಿ ಪ್ರತಿಭಾವನ್ವಿತ ಕ್ರಿಕೆಟ್ ಆಟಗಾರರು ಸಾಲಿನಲ್ಲಿ ಕ್ಯೂ ನಿಂತಿದ್ದಾರೆ. ಹೀಗೆ ಹೇಳಿದ್ದು ಬೇರೆ ಯಾರು ಅಲ್ಲ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್.
ವಿವಿಎಸ್ ಲಕ್ಷ್ಮಣ್ ಅವರು ಸದ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾದ ಹಂಗಾಮಿ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕೂಡ ದ್ರಾವಿಡ್ ಅನುಪಸ್ಥಿತಿಯಲ್ಲಿ ಲಕ್ಷ್ಮಣ್ ಅವರು ಎರಡು ಮೂರು ಸರಣಿಗಳಿಗೆ ಟೀಮ್ ಇಂಡಿಯಾದ ಹಂಗಾಮಿ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು.
ಆಯ್ಕೆ ಸಮಿತಿಗೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡುವುದು ತುಂಬಾ ಕಠಿಣವಾದ ಕೆಲಸವಾಗಿದೆ. 2023ರ ಏಕದಿನ ವಿಶ್ವಕಪ್ ಟೂರ್ನಿಗೆ ತಂಡವನ್ನು ಆಯ್ಕೆ ಮಾಡೋದು ಹರಸಾಹಸದ ಕೆಲಸ. ಸದ್ಯ ಭಾರತೀಯ ಕ್ರಿಕೆಟ್ ನಲ್ಲಿ ಸಾಕಷ್ಟು ಪ್ರತಿಭಾನ್ವಿತ ಯುವ ಕ್ರಿಕೆಟಿಗರು ಇದ್ದಾರೆ ಎಂದು ಲಕ್ಷ್ಮಣ್ ಹೇಳಿದ್ದಾರೆ.
ಬಹುತೇಕ ಎಲ್ಲಾ ಯುವ ಆಟಗಾರರು ಅತ್ಯುತ್ತಮ ಮಟ್ಟದ ಪ್ರದರ್ಶನ ನೀಡುತ್ತಿದ್ದಾರೆ. ಅವಕಾಶಗಳು ಸಿಗುವುದು ಕಡಿಮೆ ಎಂಬುದು ಅವರಿಗೂ ಗೊತ್ತಿದೆ. ಹಾಗಾಗಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ತಂಡದೊಳಗೆ ಎಂಟ್ರಿಯಾಗುವುದನ್ನು ಎದುರು ನೋಡುತ್ತಿದ್ದಾರೆ ಎಂದು ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.
ಹೌದು, ಕಳೆದ ಐದಾರು ವರ್ಷಗಳಿಂದ ಟೀಮ್ ಇಂಡಿಯಾದಲ್ಲಿ ಯುವ ಆಟಗಾರರು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕಳೆದ ಎರಡು ಮೂರು ವರ್ಷಗಳಲ್ಲಿ ವರ್ಷಕ್ಕೆ ಏಳೆಂಟು ಮಂದಿ ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದಾರೆ.
ಇದಕ್ಕೆ ಮುಖ್ಯ ಕಾರಣ ರಾಹುಲ್ ದ್ರಾವಿಡ್. ದ್ರಾವಿಡ್ 19 ವಯೋಮಿತಿ ತಂಡದ ತರಬೇತುದಾರನಾಗಿ, ಆನಂತರ ಭಾರತ ಎ ತಂಡದ ತರಬೇತುದಾರನಾಗಿ ಬಳಿಕ ಎನ್ ಸಿಎ ಮುಖ್ಯಸ್ಥನಾಗಿ ಯುವ ಆಟಗಾರರ ಪ್ರತಿಭೆಗಳನ್ನು ಬೆಳಕಿಗೆ ತಂದಿದ್ದಾರೆ. ಇದೀಗ ಟೀಮ್ ಇಂಡಿಯಾದ ಹೆಡ್ ಕೋಚ್ ಆಗಿರುವ ದ್ರಾವಿಡ್ ಮುಂದೆ ಸಾಕಷ್ಟು ಸವಾಲುಗಳಿವೆ. ಹಾಗೇ ವಿವಿಎಸ್ ಲಕ್ಷ್ಮಣ್ ಕೂಡ ದ್ರಾವಿಡ್ ಹಾದಿಯಲ್ಲೇ ಸಾಗಬೇಕಿದೆ. ಎನ್ ಸಿಎ ಮುಖ್ಯಸ್ಥರಾಗಿ ಯುವ ಆಟಗಾರರ ಪ್ರತಿಭೆಗಳನ್ನು ಬೆಳಕಿಗೆ ತರಬೇಕಿದೆ. ಹಾಗೇ ಐಪಿಎಲ್ ಮತ್ತು ದೇಶಿ ಕ್ರಿಕೆಟ್ ಟೂರ್ನಿಗಳು ಕೂಡ ಭಾರತದ ಯುವ ಆಟಗಾರರಗೆ ಸಾಕಷ್ಟು ಅವಕಾಶಗಳನ್ನು ನೀಡುತ್ತಿದೆ.
ಒಟ್ಟಿನಲ್ಲಿ ಟೀಮ್ ಇಂಡಿಯಾದಲ್ಲಿ ಭವಿಷ್ಯದಲ್ಲಿ ಐದಾರು ವರ್ಷ ಆಡುವುದೇ ದೊಡ್ಡ ಸಾಧನೆಂiÀiಗಲಿದೆ. ಈ ಹಿಂದೆ 10-15 ವರ್ಷಗಳ ಕಾಲ ಕ್ರಿಕೆಟ್ ಆಡುತ್ತಿದ್ದರು. ಆದ್ರೆ ಈಗ ಸಾಕಷ್ಟು ಸ್ಪರ್ಧೆಗಳಿವೆ. ಹೀಗಾಗಿ ಸ್ಥಿರ ಆಟವನ್ನಾಡಿದ್ರೆ ಮಾತ್ರ ಅವಕಾಶ ಸಿಗುತ್ತದೆ. ಇಲ್ಲದೆ ಇದ್ರೆ ಇನ್ನೊಬ್ಬ ಆಟಗಾರನಿಗೆ ಅವಕಾಶ ಸಿಗುತ್ತದೆ. ಏನೇ ಆಗ್ಲಿ, ಈ ರೀತಿಯ ಸ್ಪರ್ಧೆ ಇರುವುದರಿಂದ ಬಲಿಷ್ಠ ತಂಡವನ್ನು ಕಟ್ಟಲು ಸಾಧ್ಯ ಎಂಬುದರಲ್ಲಿ ಎರಡು ಮಾತಿಲ್ಲ.