ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಸಿದ್ಧವಾಗುತ್ತಿದೆ. ಈ ಮಧ್ಯೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೂಡ ಸಿಕ್ಕಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಕೊಲ್ಕತ್ತಾದ ಈಡನ್ ಗಾರ್ಡನ್ ಆತಿಥ್ಯ ನೀಡಲಿದೆ. ಪಶ್ಚಿಮ ಬಂಗಾಳ ಸರ್ಕಾರ ಟಿ20 ಪಂದ್ಯಗಳಿಗೆ ಮೈದಾನದ ಸಾಮರ್ಥ್ಯದ ಶೇಕಡಾ 75ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಅನುಮತಿ ನೀಡಿದೆ.
ಟಿ20 ಸರಣಿ ಫೆಬ್ರವರಿ 16ರಿಂದ ಆರಂಭವಾಗಲಿದೆ. ಪಶ್ಚಿಮ ಬಂಗಾಳ ಸರ್ಕಾರದ ಮಾರ್ಗಸೂಚಿಯಂತೆ ಈಡನ್ ಗಾರ್ಡನ್ನಲ್ಲಿ ಸರಿ ಸುಮಾರು 50 ಸಾವಿರ ಪ್ರೇಕ್ಷಕರಿಗೆ ಅವಕಾಶ ಸಿಗಲಿದೆ. ಈ ಮೂಲಕ ಕೊರೊನಾ ಬಳಿಕ ಅತೀ ಹೆಚ್ಚು ಪ್ರೇಕ್ಷಕರಿಗೆ ಅವಕಾಶ ಮಾಡಿಕೊಟ್ಟ ಭಾರತದ ಮೊದಲ ಮೈದಾನ ಅನ್ನುವ ಖ್ಯಾತಿ ಈಡನ್ ಗಾರ್ಡನ್ ಪಾಲಾಗಲಿದೆ.
ಕಳೆದ ನವೆಂಬರ್ನಲ್ಲಿ ಕೊಲ್ಕತ್ತಾ ಶೇಕಡಾ 70ರಷ್ಟು ಆಸನ ಸಾಮರ್ಥ್ಯದೊಂದಿಗೆ ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯಕ್ಕೆ ಆತಿಥ್ಯ ನೀಡಿತ್ತು.