ಅತಿಥೇಯ ವೆಸ್ಟ್ ಇಂಡೀಸ್(West Indies) ಹಾಗೂ ಪ್ರವಾಸಿ ಬಾಂಗ್ಲಾದೇಶ(Bangladesh) ನಡುವಿನ ಎರಡನೇ(2nd ODI) ಏಕದಿನ ಪಂದ್ಯ ಇಂದು ನಡೆಯಲಿದ್ದು, ಉಭಯ ತಂಡಗಳು ಭರ್ಜರಿ ತಯಾರಿ ಮಾಡಿಕೊಂಡಿವೆ.
ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಹೊಂದಿರುವ ಬಾಂಗ್ಲಾ ಹುಲಿಗಳು ಪ್ರಸಕ್ತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ತನ್ನ ಮೊದಲ ಗೆಲುವು ಕಂಡಿವೆ. ಈಗಾಗಲೇ ನಡೆದ ಟೆಸ್ಟ್ ಹಾಗೂ ಟಿ20 ಸರಣಿಯಲ್ಲಿ ಸೋಲಿನ ಕಹಿ ಅನುಭವಿಸಿರುವ ಬಾಂಗ್ಲಾ ಟೈಗರ್ಸ್, ಇಂದಿನ ಪಂದ್ಯವನ್ನು ಗೆದ್ದು ಏಕದಿನ ಸರಣಿ ವಶಪಡಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದರೆ. ಆದರೆ ಇಂದಿನ ಪಂದ್ಯದಲ್ಲಿ ಕಮ್ಬ್ಯಾಕ್ ನಿರೀಕ್ಷೆ ಹೊಂದಿರುವ ವಿಂಡೀಸ್ ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದೆ. ಮೊದಲ ಪಂದ್ಯದಲ್ಲಿ ಬೌಲರ್ಗಳ ಸಾಂಘಿಕ ಪ್ರದರ್ಶನ ಬಾಂಗ್ಲಾದೇಶಕ್ಕೆ ಗೆಲುವು ತಂದುಕೊಟ್ಟಿತ್ತು. ಉತ್ತಮ ಬೌಲಿಂಗ್ ಪ್ರದರ್ಶಿಸಿದ್ದ ಶೊರಿಫುಲ್ ಇಸ್ಲಾಂ ಹಾಗೂ ಮೆಹದಿ ಹಸನ್, ವೆಸ್ಟ್ ಇಂಡೀಸ್ ಬ್ಯಾಟ್ಸ್ಮನ್ಗಳಿಗೆ ಕಡಿವಾಣ ಹಾಕುವ ಮೂಲಕ ತಂಡದ ಗೆಲುವಿಗೆ ಕಾರಣರಾಗಿದ್ದರು. ಬ್ಯಾಟಿಂಗ್ನಲ್ಲಿ ನಾಯಕ ಮಹಮ್ಮದುಲ್ಲಾ, ಜವಾಬ್ದಾರಿಯ ಆಟದಿಂದ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.
ಆದರೆ ಬಾಂಗ್ಲಾ ಬೌಲಿಂಗ್ ದಾಳಿಗೆ ಸಿಲುಕಿ ಬ್ಯಾಟಿಂಗ್ ವೈಫಲ್ಯ ಕಂಡಿದ್ದ ವೆಸ್ಟ್ ಇಂಡೀಸ್, ಈ ತಪ್ಪನ್ನು ಸರಿಪಡಿಸಿಕೊಂಡು ಕಣಕ್ಕಿಳಿಯುವ ತವಕದಲ್ಲಿದೆ. ಮೊದಲ ಪಂದ್ಯದಲ್ಲಿ ಬ್ರೂಕ್ಸ್ ಹೊರತುಪಡಿಸಿ ಉಳಿದ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಬಂದಿರಲಿಲ್ಲ. ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ವೈಫಲ್ಯ ಕಂಡಿದ್ದ ವೆಸ್ಟ್ ಇಂಡೀಸ್, 6 ವಿಕೆಟ್ಗಳ ಹೀಗಾಗಿ ಸೋಲು ಕಂಡಿತ್ತು. ಹೀಗಾಗಿ ಈ ಎರಡು ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ಸರಣಿ ಗೆಲುವಿನ ವೆಸ್ಟ್ ಇಂಡೀಸ್ನ ಆಸೆ ಜೀವಂತವಾಗಿರಲಿದೆ.