ಅತಿಥೇಯ ವೆಸ್ಟ್ ಇಂಡೀಸ್(West Indies) ಹಾಗೂ ಟೀಂ ಇಂಡಿಯಾ(Team India) ನಡುವಿನ ಮೊದಲ ಏಕದಿನ(First ODI) ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ಬೌಲಿಂಗ್(Bowling) ಆಯ್ಕೆ ಮಾಡಿಕೊಂಡಿದೆ.
ಟ್ರೆನಿಡಾಡ್ನ ಕ್ವೀನ್ಸ್ ಪಾರ್ಕ್ನಲ್ಲಿ ನಡೆಯುವ ಪಂದ್ಯಕ್ಕೆ ಎರಡು ತಂಡಗಳು ತಮ್ಮದೇ ತಯಾರಿ ಮಾಡಿಕೊಂಡಿವೆ. ಇತ್ತೀಚೆಗೆ ತವರಿನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಆಘಾತ ಕಂಡಿದ್ದ ವಿಂಡೀಸ್, ಸ್ಟ್ರಾಂಗ್ ಕಮ್ಬ್ಯಾಕ್ ಮಾಡುವ ನಿರೀಕ್ಷೆ ಹೊಂದಿದೆ. ಮತ್ತೊಂದೆಡೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ 2-1ರ ಗೆಲುವು ಸಾಧಿಸಿದ್ದ ಭಾರತ, ಗೆಲುವಿನ ಉತ್ಸಾಹದೊಂದಿಗೆ ಕಣಕ್ಕಿಳಿದಿದೆ.
ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್ಗಳಾದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ರಿಷಬ್ ಪಂತ್, ಜಸ್ಪ್ರೀತ್ ಬುಮ್ರ ಹಾಗೂ ರವೀಂದ್ರ ಜಡೇಜಾ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿದೆ. ಶಿಖರ್ ಧವನ್(Shikar Dhawan) ಸಾರಥ್ಯದಲ್ಲಿ ಆಡುತ್ತಿರುವ ಭಾರತಕ್ಕೆ ಯುವ ಆಟಗಾರರೇ ಪ್ರಮುಖ ಅಸ್ತ್ರವಾಗಿದ್ದು, ಹಿರಿಯ ಆಟಗಾರರ ಸ್ಥಾನವನ್ನ ತುಂಬಲು ಯುವ ಆಟಗಾರರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ.
ಅತಿಥೇಯ ವೆಸ್ಟ್ ಇಂಡೀಸ್ ಬಹುತೇಕ ಬಾಂಗ್ಲಾದೇಶ ವಿರುದ್ಧ ಆಡಿದ್ದ ತಂಡವನ್ನೇ ಕಣಕ್ಕಿಳಿಸಿದೆ. ಆಲ್ರೌಂಡರ್ ಜೇಸನ್ ಹೋಲ್ಡರ್ ಅವರನ್ನ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದ್ದರು, ಕೋವಿಡ್-19 ಕಾರಣದಿಂದ ಜೇಸನ್ ಹೋಲ್ಡರ್ ಮೊದಲ ಪಂದ್ಯದಿಂದ ಹೊರಗುಳಿಯಬೇಕಾಗಿದೆ. ಹೀಗಾಗಿ ಟೀಂ ಇಂಡಿಯಾದ ಸವಾಲನ್ನು ಕೆರೆಬಿಯನ್ನರು ಹೇಗೆ ಎದುರಿಸುತ್ತಾರೆ ಎಂಬ ಕುತೂಹಲ ಮೂಡಿದೆ.
ಭಾರತ ತಂಡ: ಶಿಖರ್ ಧವನ್(ನಾಯಕ), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜೂ ಸ್ಯಾಮ್ಸನ್, ದೀಪಕ್ ಹೂಡ, ಅಕ್ಸರ್ ಪಟೇಲ್, ಶಾರ್ದೂಲ್ ಥಾಕೂರ್, ಮೊಹಮ್ಮದ್ ಸಿರಾಜ್, ಯುಜು಼ವೇಂದ್ರ ಚಹಲ್, ಪ್ರಸಿದ್ಧ್ ಕೃಷ್ಣ.
ವೆಸ್ಟ್ ಇಂಡೀಸ್: ಶೇಯ್ ಹೋಪ್, ಬ್ರೆಂಡನ್ ಕಿಂಗ್, ಶೆಮ್ರರಾ ಬ್ರೋಕ್ಸ್, ಕೈಲ್ ಮೈರ್ಸ್, ನಿಕೋಲಸ್ ಪೂರನ್, ರೋವ್ಮನ್ ಪೊವೆಲ್, ಅಕೆಲ್ ಹೊಸೈನ್, ರೊಮಾರಿಯೋ ಶೆಫರ್ಡ್, ಅಲ್ಜಾರಿ ಜೋಸೆಫ್, ಗುಡಕೇಶ್ ಮೊಟೈ, ಜೈಡನ್ ಸೈಲ್ಸ್.