ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಬರೋಬ್ಬರಿ ಒಂದು ತಿಂಗಳು ಬಾಕಿಯಿದ್ದು, ಈ ನಡುವೆ ವಿಶ್ವಕಪ್-2023 ಟೂರ್ನಿಗಾಗಿ ಆಸ್ಟ್ರೇಲಿಯಾ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ.
ಪ್ಯಾಟ್ ಕಮ್ಮಿನ್ಸ್ ಸಾರಥ್ಯದಲ್ಲಿ ಆಸೀಸ್ ತಂಡ ವಿಶ್ವಕಪ್ ಟೂರ್ನಿಯಲ್ಲಿ ಮುನ್ನಡೆಯಲಿದೆ. ಇವರೊಂದಿಗೆ ಜೋಶ್ ಹೇಜಲ್ವುಡ್, ಮಿಚೆಲ್ ಸ್ಟಾರ್ಕ್ ಹಾಗೂ ಸೇನ್ ಅಬೊಟ್ ಅವರುಗಳು ವೇಗದ ಬೌಲರ್ಗಳಾಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನೂ ಸ್ಪಿನ್ನರ್ಗಳಾಗಿ ಆಷ್ಟನ್ ಅಗರ್ ಮತ್ತು ಆಡಂ ಝಂಪಾ ಕಾಣಿಸಿಕೊಂಡಿದ್ದಾರೆ. ಬೌಲಿಂಗ್ ಜೊತೆಗೆ ಬ್ಯಾಟಿಂಗ್ ವಿಭಾಗದಲ್ಲೂ ಬಲಿಷ್ಠ ಆಟಗಾರರನ್ನ ಆಸ್ಟ್ರೇಲಿಯಾ ವಿಶ್ವಕಪ್ ಟೂರ್ನಿಯ ಪ್ರಾಥಮಿಕ ತಂಡಕ್ಕೆ ಆಯ್ಕೆ ಮಾಡಿದೆ.
Presenting your 15-player men’s provisional squad for the 2023 World Cup!
The final 15-player squad will be confirmed later this month 🇦🇺 #CWC23 pic.twitter.com/wO0gBbadKi
— Cricket Australia (@CricketAus) September 6, 2023
ಪ್ರಮುಖವಾಗಿ ಅನುಭವಿ ಆಟಗಾರರಾದ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಟಾಪ್ ಆರ್ಡರ್ ಬ್ಯಾಟರ್ಗಳಾಗಿ ಸ್ಥಾನ ಪಡೆದಿದ್ದರೆ. ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಕೆಮರೂನ್ ಗ್ರೀನ್ ಹಾಗೂ ಮಾರ್ಕಸ್ ಸ್ಟಾಯ್ನಿಸ್ ತಂಡದ ಆಲ್ರೌಂಡರ್ಗಳಾಗಿದ್ದಾರೆ. ಇನ್ನೂ ವಿಕೆಟ್ ಕೀಪರ್ಗಳಾಗಿ ಅಲೆಕ್ಸ್ ಕ್ಯಾರಿ ಹಾಗೂ ಜೋಶ್ ಇಂಗ್ಲಿಸ್ ವಿಶ್ವಕಪ್ ಟೂರ್ನಿಗೆ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. 2019ರ ಏಕದಿನ ವಿಶ್ವಕಪ್ನಲ್ಲಿ ಅಲೆಕ್ಸ್ ಕ್ಯಾರಿ ಆಸ್ಟ್ರೇಲಿಯಾ ತಂಡದ ಪರವಾಗಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದರು.
ಪ್ರಸ್ತುತ ಸೌತ್ ಆಫ್ರಿಕಾ ವಿರುದ್ಧ ಏಕದಿನ ಸರಣಿ ಆಡುತ್ತಿರುವ ಆಸೀಸ್ ಪಡೆ, ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತದ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನ ಆಡಲಿದೆ. ಈ ಪಂದ್ಯಗಳಲ್ಲಿ ಯಾರು ಉತ್ತಮ ಪ್ರದರ್ಶನ ನೀಡುತ್ತಾರೆ ಎಂಬುದರ ಆಧಾರದಲ್ಲಿ ಆಸೀಸ್ ತಂಡ ತನ್ನ ಮುಂದಿನ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ನೆದರ್ಲೆಂಡ್ಸ್ ಹಾಗೂ ಪಾಕಿಸ್ತಾನದ ವಿರುದ್ಧ ಆಸ್ಟ್ರೇಲಿಯಾ ತನ್ನ ಅಭ್ಯಾಸ ಪಂದ್ಯಗಳನ್ನ ಆಡಲಿದೆ. ಟೂರ್ನಿಯ ಪ್ರಮುಖ ಪಂದ್ಯದಲ್ಲಿ ಅಕ್ಟೋಬರ್ 8ರಂದು ನಡೆಯುವ ಪಂದ್ಯದಲ್ಲಿ ಅತಿಥೇಯ ಭಾರತದ ವಿರುದ್ಧದ ಪಂದ್ಯದ ಮೂಲಕ ಆಸ್ಟ್ರೇಲಿಯಾ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.
World Cup, Australia, Pat Cummins, Sports Karnataka