ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯಕ್ಕೆ ಭರ್ಜರಿ ತಯಾರಿ ಮಾಡಿಕೊಂಡು ಸಜ್ಜಾಗಿರುವ ಟೀಂ ಇಂಡಿಯಾ ಆಟಗಾರರು ಓವಲ್ ಮೈದಾನ ತಲುಪಿದ್ದಾರೆ.
ಜೂ.7ರಿಂದ ಆರಂಭವಾಗಲಿರುವ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡದ ಆಟಗಾರರು ಈಗಾಗಲೇ ಇಂಗ್ಲೆಂಡ್ನಲ್ಲಿ ಬೀಡುಬಿಟ್ಟಿದ್ದು, ಕಳೆದೊಂದು ವಾರದಿಂದ ಇಂಗ್ಲೆಂಡ್ನಲ್ಲಿ ನಿರಂತರ ಅಭ್ಯಾಸದಲ್ಲಿ ತೊಡಗಿದ್ದರು. ಇದೀಗ ಫೈನಲ್ ಪಂದ್ಯಕ್ಕೆ ಎರಡು ದಿನಗಳು ಬಾಕಿಯಿರುವ ಹಿನ್ನೆಲೆಯಲ್ಲಿ ತಂಡದ ಎಲ್ಲಾ ಆಟಗಾರರು ಓವಲ್ ಮೈದಾನಕ್ಕೆ ಬಂದಿಳಿದಿದ್ದಾರೆ.
📍 The Oval, London
Prep mode 🔛 for #TeamIndia 👌 👌#WTC23 pic.twitter.com/SHEHCkzKAi
— BCCI (@BCCI) June 4, 2023
ಫೈನಲ್ ಫೈಟ್ನಲ್ಲಿ ಪ್ಯಾಟ್ ಕಮ್ಮಿನ್ಸ್ ಪಡೆಯ ಚಾಲೆಂಜ್ ಎದುರಿಸಲು ಭಾರತದ ಆಟಗಾರರು ಎಲ್ಲ ತಯಾರಿ ಮಾಡಿಕೊಂಡಿದ್ದಾರೆ. ನಾಯಕ ರೋಹಿತ್ ಶರ್ಮ, ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ಚೇತೇಶ್ವರ್ ಪುಜಾರ, ಮೊಹಮ್ಮದ್ ಶಮಿ, ಅಶ್ವಿನ್, ಜಡೇಜಾ ಸೇರಿದಂತೆ ಎಲ್ಲಾ ಆಟಗಾರರು ಕಠಿಣ ಅಭ್ಯಾಸ ನಡೆಸಿದ್ದಾರೆ. ಆಟಗಾರರೊಂದಿಗೆ ತಂಡದ ಕೋಚ್ ರಾಹುಲ್ ದ್ರಾವಿಡ್ ಸಹ ಆಟಗಾರರೊಂದಿಗೆ ಓವಲ್ ಅಂಗಳದಲ್ಲಿ ಕಾಣಿಸಿಕೊಂಡಿದ್ದಾರೆ.
ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯ ಜೂ.7ರಂದು ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿದೆ.
WTC Final, Team India, Australia, Sports Karnataka, Rohit Sharma, Pat Cummins,